POWER SAMACHARA | KANNADA NEWS | BREKING NEWS| 27-05-2023
ದಾವಣಗೆರೆ: “ಕಲ್ಲೇಶ್ವರ ದೇವರ” ಹೆಸರಿನಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್ ಎಸ್ ಮಲ್ಲಿಕಾರ್ಜುನ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ..
ಬೆಂಗಳೂರಿನ ರಾಜಭವನದಲ್ಲಿ ಸಚಿವರು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಮತ್ತಿತರರಿದ್ದರು..
ಹೆಚ್ ಕೆ ಪಾಟೀಲ್, ಕೃಷ್ಣ ಬೈರೆಗೌಡ, ಎನ್ ಚೆಲುರಾಯಸ್ವಾಮಿ, ಕೆ. ವೆಂಕಟೇಶ್, ಡಾ. ಹೆಚ್ ಸಿ ಮಹದೇವಪ್ಪ, ಈಶ್ವರ್ ಖಂಡ್ರೆ, ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ, ಶಿವರಾಜ್ ತಂಗಡಗಿ, ಡಾ. ಶರಣಪ್ರಕಾಶ್ ಪಾಟೀಲ್, ಮಂಕಾಳ್ ವೈದ್ಯ, ಲಕ್ಷ್ಮಿ ಹೆಬ್ಬಾಳಕರ್, ರಹೀಂ ಖಾನ್, ಡಾ. ಸುಧಾಕರ್, ಸಂತೋಷ್ ಲಾಡ್, ಎನ್ ಎಸ್ ಬೋಸೆರಾಜು, ಭೈರತಿ ಸುರೇಶ್, ಮಧು ಬಂಗಾರಪ್ಪ, ಡಾ. ಎಂಸಿ ಸುಧಾಕರ್, ಬಿ ನಾಗೇಂದ್ರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ..
ಎಸ್ ಎಸ್ ಮಲ್ಲಿಕಾರ್ಜುನ್ ನಡೆದು ಬಂದ ದಾರಿ.
ಎಸ್ ಎಸ್ ಮಲ್ಲಿಕಾರ್ಜುನ್ ಅವರು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮೂರನೇ ಪುತ್ರರಾಗಿದ್ದು, ಬಿಕಾಂ ಪದವೀಧರರಾಗಿದ್ದಾರೆ..
ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್ ಎಸ್ ಮಲ್ಲಿಕಾರ್ಜುನ್, ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, 1989 ರಲ್ಲಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1999 ರಲ್ಲಿ ಗೆಲುವು ಸಾಧಿಸಿ ಎಸ್ ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವರಾಗಿದ್ದರು, 2013ರಲ್ಲಿ ಗೆಲುವು ಸಾಧಿಸಿ ಸಿದ್ದರಾಮಯ್ಯ ಸರ್ಕಾರದಲ್ಲಿ 2016 ರಲ್ಲಿ ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾಗಿದ್ದರು, 2018 ರಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಎ ರವೀಂದ್ರನಾಥ್ ಅವರ ವಿರುದ್ದ ಸೋಲು ಕಂಡಿದ್ದರು, 2023 ರಲ್ಲಿ ಮತ್ತೆ ಗೆಲುವು ಸಾಧಿಸಿರುವ ಎಸ್ ಎಸ್ ಮಲ್ಲಿಕಾರ್ಜುನ್, ಶನಿವಾರ ಇಂದು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ..