POWER SAMACHARA | KANNADA NEWS | BREKING NEWS| 22-06-2023..

ದಾವಣಗೆರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ವೈ ವಾಗ್ದಾಳಿ ನಡೆಸಿದ್ದು, ಅಧಿವೇಶನದೊಳಗಾಗಿ ಗ್ಯಾರಂಟಿ ಜಾರಿ ಮಾಡದಿದ್ದರೆ ಸದನದ ಒಳಗೆ ಹೊರಗೆ ಧರಣಿ ಮಾಡುತ್ತೇವೆ, ವಿಧಾನಸೌಧದ ಮುಂಭಾಗರ ಧರಣಿ ಕೂರುತ್ತೇನೆ ಎಂದು ಗುಡುಗಿದ್ದಾರೆ..

ದಾವಣಗೆರೆ ನಗರದ ರೇಣುಕಾ ಮಂದಿರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಐದು ಯೋಜನೆ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಲಿ, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡ್ತಿದೆ, ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ರಾ..!? ಎಂದು ಪ್ರಶ್ನೆ ಮಾಡಿದರು.

ಚುನಾವಣೆಯಲ್ಲಿ ಗೆಲ್ಲಬೇಕು ಅಂತ ಅವರೇ ಭರವಸೆ ಕೊಟ್ಟಿದ್ದಾರೆ, ಕೇಂದ್ರ ಸರ್ಕಾರ ಈಗಾಲೇ 5 ಕೆಜಿ ಅಕ್ಕಿ ಕೊಡ್ತಿದೆ, ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು, ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಬಿಎಸ್ವೈ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು ಸರಿಯಲ್ಲ, 10 ಕೆಜಿ ಅಕ್ಕಿ ಕೊಡದಿದ್ದರೆ ಮುಂಬರುವ ವಿಧಾನ ಮಂಡಲ ಅಧಿವೇಶನದ ಹೊರಗೆ ಒಳಗೆ ಪ್ರತಿಭಟನೆ ನಡೆಸುತ್ತೇವೆ, ಇವತ್ತು ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕಾ ಉದ್ಯಮಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿದ್ದರಾಮಯ್ಯ ನವರೇ ಹೇಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ..