POWER SAMACHARA | KANNADA NEWS | BIG BREKING NEWS|18-05-2023

ದಾವಣಗೆರೆ : ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ..

ನವ ದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲ, ವೇಣುಗೋಪಾಲ್ ರಾವ್ ಜಂಟಿ ಸುದ್ದಿಗೋಷ್ಠಿ ನಡೆಸಿ ಸಿಎಂ, ಡಿಸಿಎಂ ಹೆಸರನ್ನ ಘೋಷಣೆ ಮಾಡಿದ್ದಾರೆ..

ಶನಿವಾರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠಿರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ, ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದು ಸುರ್ಜಿವಾಲ, ವೇಣುಗೋಪಾಲ್ ಬಣ್ಣಿಸಿದ್ದಾರೆ..