POWER SAMACHARA | KANNADA NEWS | 24-04-2023
ದಾವಣಗೆರೆ; ಚಾಲೆಂಜಿಗ್ ಸ್ಟಾರ್ ದರ್ಶನ್ ತೂಗುದೀಪ್ ಹಾಗೂ ಮಾಧ್ಯಮದವರ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಕೊನೆ ಬಿದ್ದಿದೆ, ಭಾವನಾತ್ಮಕ ಪತ್ರ ಮುಖೇನ ನಟ ದರ್ಶನ ಮಾಧ್ಯಮದವರ ಕ್ಷಮೆ ಕೇಳಿದ್ದಾರೆ ಎಂಬ ಪತ್ರವೊಂದು ಹರಿದಾಡುತ್ತಿದೆ, ಆದರೆ ಇದು ಸತ್ಯವೋ, ಅಥವಾ ಸುಳ್ಳೋ ಅನ್ನೋದರ ಬಗ್ಗೆ ದರ್ಶನ್ ಸ್ಪಷ್ಟನೆ ಕೊಡಬೇಕಿದೆ..
ಕೆಲವೊಂದು ಘಟನೆ ಸಂಬಂಧ ದರ್ಶನ್ ಪತ್ರಕರ್ತರಿಗೂ ಮತ್ತು ಮಾಧ್ಯಮ ಸಂಸ್ಥೆಗಳಿಗೆ ಅವ್ಯಾಚ್ಯವಾಗಿ ಬೈದಿದ್ದರು, ಈ ಹಿನ್ನಲೆ ಬಹುತೇಕ ಮಾಧ್ಯಮ ಸಂಸ್ಥೆಗಳು ದರ್ಶನ್ ಅವರ ಬಗೆಗಿನ ಸುದ್ದಿ ಪ್ರಸಾರ ಮಾಡದಿರುವ ಶಪಥ ಮಾಡಿದ್ದರು, ಆದರೆ ಕೊನೆಗೆ ದರ್ಶನ್ ಭಾವನಾತ್ಮಕವಾಗಿ ಸುದ್ದಿ ಸಂಸ್ಥೆಗಳಿಗೆ ಪತ್ರ ಬರೆಯುವ ಮುಖೇನ ವಿವಾದಕ್ಕೆ ಅಂತ್ಯ ಹಾಡಿದ್ದಾರೆ.. ಆದರೆ ಇದು ನಿಜ ಪತ್ರವೊ, ಅಥವಾ ಫೇಕ್ ಅಂತ ಮಾಹಿತಿ ತಿಳಿದು ಬಂದಿಲ್ಲ, ಇದಕ್ಕೆ ದರ್ಶನ್ ಅವರೇ ಉತ್ತರಿಸಬೇಕಿದೆ..
ದರ್ಶನ್ ಬರೆದಿರುವ ಪತ್ರದಲ್ಲೇನಿದೆ..
ಎಲ್ಲಾ ಮಾಧ್ಯಮ ಮಿತ್ರರಿಗೂ ನಮಸ್ಕಾರ…
75 ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಕೆಲವು ವ್ಯಕ್ತಿಗಳು ಮತ್ತು ಕೆಲವು ಹೆಸರುಗಳು ಮಾತ್ರ ಚರಿತ್ರೆಯಲ್ಲಿ ಉಳಿದಿರುತ್ತವೆ. ಆ ಸಾಲಿನಲ್ಲಿ ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ತೂಗುದೀಪ ಶ್ರೀನಿವಾಸ್, ಬಾಲಕೃಷ್ಣ, ದಿನೇಶ್ ಇವರ ಸಮಕಾಲೀನ ದಿಗ್ಗಜರುಗಳನ್ನು ಕರ್ನಾಟಕದ ಜನರು ಮೆಚ್ಚಿಕೊಂಡು ಮೆರೆಸಿದರು. ಒಪ್ಪುವ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರೋತ್ಸಾಹಿಸಿರುತ್ತೀರಿ. ಈ ಸಾಲಿನಲ್ಲಿ ಇದ್ದಂತಹ ಕನ್ನಡ ಚಿತ್ರರಂಗ ಮರೆಯಲಾಗದಂತಹ ನಟ ತೂಗುದೀಪ ಶ್ರೀನಿವಾಸ್ ರವರ ಕುಟುಂಬದಿಂದ ಬಂದಂತಹ ಸಣ್ಣ ಕುಡಿ ನಾನು, ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗ ನನ್ನನ್ನು ಆಶೀರ್ವದಿಸಿ ಪ್ರೋತ್ಸಾಹಿಸಿ ಹಲವಾರು ಬಾರಿ ನಾನು ಮಾಡಿರುವ ಪಾತ್ರಗಳ ಬಗ್ಗೆ ವಿಶ್ಲೇಷಣೆ ಮಾಡಿ, ನನ್ನ ಪಾತ್ರದಲ್ಲಿರುವ ತಪ್ಪುಗಳನ್ನು ತಿದ್ದಿ ಹೇಳಿರುವಿರಿ, ನಾನು ಸಹ ಮುಂದಿನ ದಿನಗಳಲ್ಲಿ ಮಾಡಿರುವಂತ ಚಿತ್ರಗಳಲ್ಲಿ ನನ್ನ ಪಾತ್ರಗಳಲ್ಲಿ ಬರುವ ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವೆನು.
ಅದೇ ರೀತಿಯಲ್ಲಿ ನಿಜ ಜೀವನದಲ್ಲಿ ಸಹ ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ.
ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬಾ ಚಿಕ್ಕದ್ದು, ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ..
ನನ್ನ ಈ ಭಾವನೆಯನ್ನು ನನ್ನ ಎಲ್ಲಾ ಮಿತ್ರರು, ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಂಡು ಗೌರವಿಸಬೇಕು..
ಇಂತಿ ನಿಮ್ಮ ದಾಸ..
ದರ್ಶನ್ ತೂಗುದೀಪ್..