POWER SAMACHARA | KANNADA NEWS | BREKING NEWS| 11-07-2023..

ಜೈನ ಮುನಿ ಹತ್ಯೆ ಖಂಡಿಸಿ ದಾವಣಗೆರೆಯಲ್ಲಿ ಪ್ರತಿಭಟನೆ..

ದಾವಣಗೆರೆ: ಚಿಕ್ಕೋಡಿ ಜೈನ ಮುನಿಗಳ ಬರ್ಬರ ಹತ್ಯೆ ಹಿನ್ನಲೆ ದಾವಣಗೆರೆಯಲ್ಲಿ ಜೈನ ಸಮುದಾಯ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ..

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗ ಪ್ರತಿಭಟನೆ ನಡೆಸಿದ ನೂರಾರು ಜೈನ ಸಮಾಜ ಭಾಂಧವರು, ಕೊಲೆ ಮಾಡಿದವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದರು..

ಜೈನ ಸಮುದಾಯ ಭಯದ ವಾತಾವರಣದಲ್ಲಿ ಜೀವನ ನಡೆಸುತ್ತಿದೆ, ರಾಜ್ಯ ಸರ್ಕಾರ ಈ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ, ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ, ಕೂಡಲೇ ಜೈನ ಮುನಿಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು..