Tuesday, July 8, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home Home

ನಾಯಕ ಜನಾಂಗ ಸಿಎಂ ಆಗಬೇಕೆಂಬುದು ನಮ್ಮ ಆಸೆ : ಕೆಎನ್ ರಾಜಣ್ಣ..

Power Samachara News by Power Samachara News
June 19, 2023
in Home
0
ನಾಯಕ ಜನಾಂಗ ಸಿಎಂ ಆಗಬೇಕೆಂಬುದು ನಮ್ಮ ಆಸೆ : ಕೆಎನ್ ರಾಜಣ್ಣ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 19-06-2023..

ದಾವಣಗೆರೆ: ನಾಯಕ ಸಮುದಾಯವರು ಈಗ ಡಿಸಿಎಂ ಆಗಬೇಕು ಮುಂದೆ ಸಿಎಂ ಆಗಬೇಕು ಎಂದು ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ..

ದಾವಣಗೆರೆ ಜಿಲ್ಲೆ ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ನಾಯಕ ಸಮುದಾಯದಲ್ಲಿ ಸಿಎಂ ಆಗೋ ಅರ್ಹತೆ ಸತೀಶ್ ಜಾರಕಿಹೊಳಿಗೆ ಇದೆ, ಮುಂದಿನ ದಿನಗಳಲ್ಲಿ ನಮ್ಮ ಸಮುದಾಯ ವ್ಯಕ್ತಿ ಸಿಎಂ ಆಗಬೇಕು, ನಾನು ಮುಂದೆ ಯಾವುದೇ ಚುನಾವಣೆಯಲ್ಲಿ‌ ನಿಲ್ಲೋದಿಲ್ಲ, ಆದರೆ ನಮ್ಮ‌ ಗುರಿ ಇರೋದು ಒಂದೇ, ನಮ್ಮ ಸಮುದಾಯದ ವ್ಯಕ್ತಿ ಮುಂದಿನ ಮುಖ್ಯಮಂತ್ರಿ ಆಗೋದು, ಅದಕ್ಕೆ ನಮ್ಮ ಸತೀಶ್ ಜಾರಕಿಹೊಳಿಗೆ ಎಲ್ಲ ಅರ್ಹತೆ ಇದೆ ಎಂದರು..

ನಾವು ಈಗ ಡಿಸಿಎಂ ಸ್ಥಾನ ಕೇಳಲು ಹೊರಟಿದ್ವಿ.

ನಾವು ಈಗ ಡಿಸಿಎಂ ಕೇಳಲು ಹೊರಟ್ಟಿದ್ದೆವು, ಆದರೆ ರಾಜಕೀಯ ಸಂಘರ್ಷಗಳಲ್ಲಿ ಅದು ಆಗಲಿಲ್ಲ‌, ಡಿಸಿಎಂ ಬಗ್ಗೆ ಒತ್ತಾಯವನ್ನು ಕೂಡ ಮುಂದೆ ಕೇಳುತ್ತೇವೆ ಎಂದರು..

ಕಿಚ್ಚ ಸುದೀಪ್ ವಿರುದ್ದ ಕಿಡಿ

ಕಿಚ್ಚ ಸುದೀಪ್ ಸಮುದಾಯದ ವಿರುದ್ದವೇ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾರೆ, ಸಾಮಾನ್ಯ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡಿದ್ರೆ ಏನು ಅನ್ನಿಸ್ತಾ ಇರ್ಲಿಲ್ಲ, ಎಸ್ಟಿ ಮೀಸಲು ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು ನೋವು ಅನ್ನಿಸ್ತು, ಎಸ್ಟಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರೆಲ್ಲ ನಾಯಕ ಸಮುದಾಯದವರೇ, ಸಮುದಾಯದ ವಿರುದ್ಧವೇ ಪ್ರಚಾರಕ್ಕೆ ಇಳಿದಿದ್ದು ವಿಪರ್ಯಾಸ, ಇದು ಪ್ರತಿಭಾನ್ವಿತ ನಟನ ಭವಿಷ್ಯಕ್ಕೆ ಕುತ್ತು ತರುತ್ತೆ, ಆತನಿಗೆ ಅನುಭವ ಕಡಿಮೆ ಇದೆ, ಶ್ರೇಷ್ಠ ನಟನಾಗಲು ಅವಕಾಶ ಇದೆ, ಇದನ್ನು ಅರಿತುಕೊಂಡು ಮುಂದುವರೆಯಲಿ ಎಂದು ಕಿವಿಮಾತು ಹೇಳಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಎಸ್ಟಿ ಸಮುದಾಯದ ಹೆಸರಲ್ಲಿ ನಕಲಿ ಜಾತಿ ಪ್ರಮಾಣ..!

ಎಸ್ಟಿ ಸಮುದಾಯದ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಹೆಚ್ಚಾಗಿದೆ, ಅದು ಎಲ್ಲರಿಗೂ ಗೊತ್ತು, ಏನೂ ಮಾಡಲಾಗದ ಸ್ಥಿತಿಯಲ್ಲಿದ್ದೇವೆ, ನಕಲಿ ಜಾತಿ ಪತ್ರ ವ್ಯವಸ್ಥೆ ತಪ್ಪಿಸದಿದ್ದರೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗತ್ತೆ, ರಾಜಕಾರಣಿಗಳಿಗೆ ಸುಳ್ಳೇ ಬಂಡವಾಳ, ನಕಲಿ ಜಾತಿ ಪತ್ರ ತಪ್ಪಿಸುವ ಕೆಲಸ ಮಾಡುತ್ತೇವೆ, ಮೀಸಲಾತಿ‌ ಶೇ.50 ರಷ್ಟು ದಾಟಿರೋದ್ರಿಂದ ಎಸ್ಟಿ ಮೀಸಲು 9 ಶೆಡ್ಯೂಲ್ ಗೆ ಸೇರಿಸಲು ಮನವಿ ಮಾಡಿದ್ದೇವೆ ಎಂದರು..

ನಾನು ಸಾಮಾನ್ಯ ಕ್ಷೇತ್ರದಿಂದ‌ ಸ್ಪರ್ಧಿಸಿದ್ದು, ನನ್ನ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯ 100ರಷ್ಟು ಮತ ಹಾಕಿದೆ, ಮೇಲ್ವರ್ಗ ಅಂತ ಯಾರೂ ಬಳಸಬೇಡಿ, ಅವರನ್ನು ಮುಂದುವರಿದ ವರ್ಗ ಅಂತ ಬಳಸಿ, ಅವ್ರನ್ನ ಮೇಲ್ವರ್ಗ ಅಂತ ಕರೆದರೆ, ನಾವೇ‌ನು ಕೆಳವರ್ಗದವರಾ, ನಾವು ಯಾವುದರಲ್ಲಿ ಕಡಿಮೆ‌ ಇದ್ದೇವೆ, ನಾವು ಯಾವತ್ತೂ ಕೆಳವರ್ಗದವರಲ್ಲ, ಅವರೇನು ಮೇಲಿಂದ ಬಂದಿಲ್ಲ, ಅವ್ರು ನಮ್ಮಂಗೆ ಬಂದವರು, ಇನ್ಮುಂದೆ ಮುಂದುವರಿದವರು, ಹಿಂದುಳಿದವರು ಅಂತ ಮಾತ್ರ ಕರೀಬೇಕು, ಮೇಲ್ವರ್ಗದಿಂದ ಅನ್ಯಾಯ ಎನ್ನಬಾರದು, ಮುಂದುವರಿದ ವರ್ಗದಿಂದ ಅನ್ಯಾಯ ಎನ್ನಬೇಕು, ಚುನಾವಣೆ ವೇಳೆ ನಮ್ಮ‌ ನಮ್ಮ‌ ಮಧ್ಯೆ ಪೈಪೋಟಿ ಇರುತ್ತೆ, ಚುನಾವಣೆ ಮುಗಿದ ಬಳಿಕ ದ್ವೇಷ ರಾಜಕಾರಣ ಮಾಡಬಾರದು ಎಂದು ದಾವಣಗೆರೆಯ ಹರಿಹರದ ರಾಜನಹಳ್ಳಿಯಲ್ಲಿ ಕೆಎನ್ ರಾಜಣ್ಣ ಹೇಳಿದ್ದಾರೆ..

ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಂದಾಗಬೇಕು, 15 ಎಸ್ಟಿ ಕ್ಷೇತ್ರದಲ್ಲಿ ನಮ್ಮ ನಮ್ಮ‌ ಮಧ್ಯೆಯೇ ಹೋರಾಟ ಇರುತ್ತೆ ಎಂದರು..

ದೇವದಾಸಿ ಪದ್ಧತಿ ನಿರ್ಮೂಲನೆಗೆ ಕ್ರಮ‌‌ ಕೈಗೊಳ್ಳುತ್ತೇವೆ, ಬ್ರಾಹ್ಮಣರು ಈಗ ಹೋಮಾ ಹವನ ಕಡಿಮೆ ಮಾಡಿದ್ದಾರೆ, ಆದರೆ ನಾವೇ ಶೂದ್ರರೇ ಹೆಚ್ಚು ಮಾಡುತ್ತುದ್ದೇವೆ, ಯಾವ ಬ್ರಾಹ್ಮಣ ರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹೀಗೆ ಹೇಳ್ದೆ ಅಂತ ನಾನು ಬ್ರಾಹ್ಮಣ ವಿರೋದಿ ಅಂತ ಅಲ್ಲ, ಮಾದ್ಯಮ ಗಳು ನಾಳೆ ಬೆಳಗ್ಗೆ ಬ್ರೇಕಿಂಗ್ ನ್ಯೂಸ್ ಅಂತ ಹಾಕಬೇಡಿ, ಅದು ನಾನು ಹೇಳಿದ್ದಲ್ಲ ನನ್ನ ಸ್ನೇಹಿತ ಹೇಳಿದ್ದು ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ..

Tags: Davanagerehariharakn rajannaಕೆ ಎನ್ ರಾಜಣ್ಣತುಮಕೂರುದಾವಣಗೆರೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In