POWER SAMACHARA | KANNADA NEWS | BREKING NEWS| 17-08-2023..

POWER EXCLUSIVE

ನವ ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಡವಾಗಿ ಟಿಕೆಟ್ ಘೋಷಣೆ ಮಾಡಿ ಪೆಟ್ಟು ತಿಂದಿದ್ದ ಬಿಜೆಪಿ ಇದೀಗ ಎಚ್ಚೆತ್ತುಕೊಂಡಿದೆ, ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಹಿನ್ನಲೆ ಚುನಾವಣೆ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡುವ ಮುನ್ನವೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿ ಪ್ರತಿಪಕ್ಷಗಳು ಹುಬ್ಬೇರುವಂತೆ ಮಾಡಿದೆ..

ಛತ್ತಿಸ್ ಗಢ, ಮಧ್ಯ ಪ್ರದೇಶದಲ್ಲಿ ಅಭ್ಯರ್ಥಿಗಳ ಘೋಷಣೆ..!

ವರ್ಷಾಂತ್ಯದಲ್ಲಿ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ, ಬಳಿಕ ಲೋಕಸಭೆ ಚುನಾವಣೆ ಇರುವುದರಿಂದ ಪಂಚರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದೇ ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ, ಹೀಗಾಗಿ ಕರ್ನಾಟಕದಲ್ಲಿ ಪೆಟ್ಟು ತಿಂದಿರುವ ಬಿಜೆಪಿ ಫಿನಿಕ್ಸ್ ನಂತೆ ಎದ್ದು ಬರಲು ತಂತ್ರಗಾರಿಕೆ ರೂಪಿಸಿದೆ ಎನ್ನಲಾಗಿದೆ, ಹೀಗಾಗಿ ಭಾರತೀಯ ಚುನಾವಣಾ ಆಯೋಗವು ಚುನಾವಣಾ ದಿನಾಂಕಗಳನ್ನು ಪ್ರಕಟಿಸುವ ಮೊದಲೇ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವುದು ಇದೇ ಮೊದಲಾಗಿದೆ, 90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ 21 ಮತ್ತು 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ 39 ಅಭ್ಯರ್ಥಿಗಳನ್ನು ಪಕ್ಷ ಘೋಷಣೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ, ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಕಾರ್ಯತಂತ್ರಗಳ ತಯಾರಿಗಾಗಿ ಪಕ್ಷದ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ, ಬಂಡಾಯ ಅಭ್ಯರ್ಥಿಗಳ ಸಮಸ್ಯೆಗಳನ್ನು ಮುಂಚಿತವಾಗಿ ಪರಿಹರಿಸಬಹುದಾದ ಕಾರಣಕ್ಕೆ ಅಭ್ಯರ್ಥಿಗಳ ಹೆಸರನ್ನು ಮೊದಲೇ ಘೋಷಿಸುವ ನಿರ್ಧಾರಕ್ಕೆ ಬಿಜೆಪಿ ನಾಯಕತ್ವ ಮುಂದಾಗಿದೆ. ಕರ್ನಾಟಕ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾದ ನಂತರ, ಪಕ್ಷವು ಹೊಸ ಯೋಜನೆಗಳತ್ತ ಮುಖ ಮಾಡಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಹೀಗೆ ಈ ವರ್ಷದ ಕೊನೆಯಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಇವುಗಳ ಪೈಕಿ ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಪ್ರತಿಪಕ್ಷಗಳು ಆಡಳಿತ ನಡೆಸುತ್ತಾ ಇವೆ..