POWER SAMACHARA | KANNADA NEWS | BREKING NEWS| 03-12-2024
ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಎನ್ ಬಿ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ನರಸಪ್ಪರ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಈ ಹಿಂದೆ ದಪ್ಪ ಇದ್ದ ರಾಘವೇಂದ್ರ, ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಛಲ ತೆಗೆದುಕೊಂಡು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ, ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್, ಸಖತ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ..
ಇನ್ನೂ ರಾಘವೇಂದ್ರನ ಬಾಡಿ ಬಿಲ್ಡಿಂಗ್ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ಚಿನ್ನ ಗೆಲ್ಲುವ ಮೂಲಕ ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿ ತಿಂಗಳಿನಲ್ಲಿ ಮಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆ ನಡೆಯಲಿದೆ, ಇನ್ನೂ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ..