POWER SAMACHARA | KANNADA NEWS | BREKING NEWS| 10-09-2023.. ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಸೋತು ಸುಣ್ಣವಾಗಿದೆ, ಸೋತ ಬಳಿಕ ಇನ್ನೂ ಟ್ರ್ಯಾಕ್ ಗೆ ಮರಳಿ ಬರಲು ಸಾಧ್ಯವಾಗುತ್ತಿಲ್ಲ, ಈ ನಡುವೆ ಆಪರೇಷನ್ ಹಸ್ತ ಪಕ್ಷದಲ್ಲಿ ಅಲ್ಲೋಕ ಕಲ್ಲೋಲ ಸೃಷ್ಠಿ ಮಾಡಿದರೆ, ಇತ್ತ ಪಕ್ಷದಲ್ಲಿ ಒಳ ಜಗಳ ಮಿತಿ ಮೀರಿದೆ, ರೇಣುಕಾಚಾರ್ಯ ರೆಬೆಲ್ ಆಗಿ ಸ್ವ ಪಕ್ಷದವರ ವಿರುದ್ದ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ, ಜೊತೆಗೆ ಹಿರಿಯ ನಾಯಕರನ್ನೂ ಭೇಟಿ ಯಾಗುತ್ತಿದ್ದು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೂ ಮುಂದಾಗಿ ಸಂಚಲನ ಮೂಡಿಸಿದ್ದಾರೆ..  ಹೌದು.. ಕರ್ನಾಟಕ ವಿಧಾನ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿತ್ತು, ಬಳಿಕ ಪಕ್ಷದಲ್ಲಿ ಆಂತರಿಕ ಕಿತ್ತಾಟ ನಡೆದು ಬಿಜೆಪಿ ಕೊತ ಕೊತ ಅಂತಿದೆ, ಈ ಸೋಲಿಗೆ ಬಿಎಸ್ ವೈ ಕಡೆಗಣಿಸಿದ್ದೆ ಕಾರಣ ಅಂತಾ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಜಗಳೂರು ಮಾಜಿ ಶಾಸಕ ಗುರುಸಿದ್ದನಗೌಡರು ಹಾಗೂ ಅವರ ಕುಟುಂಬವನ್ನು ಬಿಜೆಪಿಯಿಂದ ಉಚ್ಚಾಟಿಸಿದ ಹಿನ್ನಲೆ ದಾವಣಗೆರೆ ನಗರದ ಸಿದ್ದವೀರಪ್ಪ ಬಡಾವಣೆಯಲ್ಲಿರುವ ಗುರುಸಿದ್ದನಗೌಡರ ಮನೆಗೆ ಭೇಟಿ ನೀಡಿ ಕೆಲವೊತ್ತು ಮಾತುಕತೆ ನಡೆಸಿದರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗಳೂರಿನಲ್ಲಿ ಬಿಜೆಪಿಗೆ ಬೆಂಬಲಿಸುವ ಬದಲು ಬೇರೆ ವ್ಯಕ್ತಿಗೆ ಬೆಂಬಲಿಸಿದ್ದರು ಎಂದು ಬಿಜೆಪಿ ಅಭ್ಯರ್ಥಿಯಾಗಿದ್ದ ಎಸ್ ವಿ ರಾಮಚಂದ್ರಪ್ಪ ಪಕ್ಷದ ಜಿಲ್ಲಾಧ್ಯಕ್ಷರಿಗೆ ದೂರು ನೀಡಿದ್ದರು, ಈ ಹಿನ್ನಲೆ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಗುರುಸಿದ್ದನಗೌಡ ಅವರನ್ನು ಉಚ್ಚಾಟಿಸಿದ್ದರು, ಹೀಗಾಗಿ ಇಂದು ಗುರುಸಿದ್ದನಗೌಡ ಮನೆಗೆ ಭೇಟಿ ನೀಡಿದ ರೇಣುಕಾಚಾರ್ಯ, ಜಿಲ್ಲಾಧ್ಯಕ್ಷನ ಏಕಪಕ್ಷೀಯ ನಿರ್ಧಾರಕ್ಕೆ ಕೆಂಡಕಾರಿದರು, ಇಂತವರಿಂದಲೇ ಪಕ್ಷ ಹಾಳಾಗುತ್ತಿದೆ, ಯಾವುದೇ ನೋಟೀಸ್ ನೀಡದೇ ಉಚ್ಚಾಟನೆ ಮಾಡಿದ್ದು ಖಂಡನೀಯ ಚುನಾವಣೆಯ ಸಂದರ್ಭದಲ್ಲಿ ಓಡಾಡಿ ಪಕ್ಷ ಕಟ್ಟಿದವರು ಗುರುಸಿದ್ದನಗೌಡ್ರು. ಚುನಾವಣೆಯಲ್ಲಿ ಅಭ್ಯರ್ಥಿ ವಿರುದ್ದ ಕೆಲಸ ಮಾಡಿದರೆ ನೋಟೀಸ್ ನೀಡಬೇಕು. ಆದರೆ ಯಾವುದೇ ನೋಟೀಸ್ ನೀಡದೆ ಪಕ್ಷದಿಂದ ಗುರುಸಿದ್ದನಗೌಡ್ರನ್ನು ಕುಟುಂಬಸ್ಥರನ್ನು ಉಚ್ಚಾಟನೆ ಮಾಡಿದ್ದಾರೆ, ಡಾ.ರವಿಕುಮಾರ್ ಕೂಡ ಲೋಕಾಸಭಾ ಚುನಾವಣೆ ಟಿಕೇಟ್ ಆಕಾಂಕ್ಷಿ, ಅವರು ಬೆಳೆಯಬಾರದು ಎಂದು ಉಚ್ಚಾಟನೆ ಮಾಡಿದ್ದು ಖಂಡನೀಯ, ಮಾಜಿ ಸಚಿವ ರವೀಂದ್ರನಾಥ್, ಮಾಜಿ ಶಾಸಕ ಗುರುಸಿದ್ದನಗೌಡ್ರು ಅಂತವರನ್ನು ಮೂಲೆಗುಂಪು ಮಾಡುತ್ತಾರೆ. ಜಿಲ್ಲೆಯ ಐದು ಶಾಸಕರು ಒಟ್ಟಾಗಿ ಸಚಿವ ಸ್ಥಾನ ಕೇಳಿದರೂ ಕೊಡಲು ಬಿಡಲಿಲ್ಲ. ಸಚಿವ ಸ್ಥಾನ ತಪ್ಪಿಸಿದರು. ಇತ್ತ ಏಕಪಕ್ಷೀಯವಾಗಿ ಜಿಲ್ಲಾ ಅಧ್ಯಕ್ಷರು ನಿರ್ಧಾರ ಕೈಗೊಂಡಿದ್ದಾರೆ ಎಂದು ಜಿಲ್ಲಾಧ್ಯಕ್ಷರ ನಡೆಯನ್ನು ಖಂಡಿಸಿದರು.  ದೇಶಕ್ಕೆ ಮೋದಿ, ರಾಜ್ಯಕ್ಕೆ ಬಿಎಸ್ ವೈ.. ದೇಶಕ್ಕೆ ಮೋದಿ ಹೇಗೋ ರಾಜ್ಯಕ್ಕೆ ಯಡಿಯೂರಪ್ಪ ಆಗೇ. ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋದ ಮಹಾನ್ ನಾಯಕ. ಆದರೆ ವ್ಯವಸ್ಥಿತವಾಗಿ ಯಡಿಯೂರಪ್ಪ ನವರನ್ನು ಇಳಿಸುವ ಕೆಲಸ ಮಾಡಿದ್ದರು. ನಮ್ಮವರೇ ಆರೋಪ ಹೊರಿಸಿ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು ಎಂದು ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದರು, ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆದ ಮೇಲೆ ಬಿಎಸ್ ವೈ ಅವರನ್ನು ಈಗ ಮುಂದೇ ತಂದಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಬಿಎಸ್ ವೈ ನೋಡದ ಹಳ್ಳಿ ಇಲ್ಲ. ಆದರೆ ಈಗ ಗ್ರಾ.ಪಂ ಗೆಲ್ಲೋಕೆ ಆಗದೇ ಇರೋರು ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದರು ಎಂದು ಸ್ವ ಪಕ್ಷ ನಾಯಕರ ಮೇಲೆ ಹರಿಹಾಯ್ದ ಅವರು ಈಗ ವೋಟ್ ಬೇಕು ಅಂತ ಬಿಎಸ್ ವೈ ನಾಯಕತ್ವ ಎಂದು ಹೇಳ್ತಾ ಇದ್ದಾರೆ ಎಂದರು. ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಬಳಿಕ ಮುಂದಿನ ನಿರ್ಧಾರ.. ನಾನು ಕೂಡ ದಾವಣಗೆರೆ ಎಂಪಿ ಚುನಾವಣೆ ಟಿಕೆಟ್ ಆಕಾಂಕ್ಷಿ. ಟಿಕೆಟ್ ಬಗ್ಗೆ ಕಾದು ನೋಡುತ್ತೇನೆ. ಟಿಕೆಟ್ ಸಿಗದೇ ಇದ್ದರೆ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ. ನನ್ನ ಹೋರಾಟ ಯಾರ ವಿರುದ್ದ ಕತ್ತಿ ಮಸಿಯೋಕೆ ಅಲ್ಲ, ಪಕ್ಷದ ಉಳಿವಿಗೆ ಕೆಲಸ ಮಾಡುತ್ತೇನೆ, ನಾಳೆ ಮಾಡಾಳು ವಿರುಪಾಕ್ಷಪ್ಪರನ್ನ ಭೇಟಿ ಮಾಡುತ್ತೇನೆ, ನನ್ನನ್ನು ಬೇಕಾದರೆ ರೆಬೆಲ್ ರೇಣುಕಾಚಾರ್ಯ ಎಂದು ಕರೆದುಕೊಳ್ಳಲಿ, ನಾನು ಯಾವುದಕ್ಕೂ ಹೆದರುವುದಿಲ್ಲ. ನನ್ನ ಮೇಲೆ ತೂಗುಗತ್ತಿ ತೂಗುತ್ತಾ ಇದೆ. ನಾನು ಯಾವುದಕ್ಕೂ ಹೆದರಲ್ಲ. ನೋಟೀಸ್ ಗೆ ಉತ್ತರ ಕೋಡೋದಿಲ್ಲ. ಬಿಎಸ್ ವೈ ವಿರುದ್ದ ಮಾತನಾಡಿದವರ ಮೇಲೆ ಮೊದಲು ಕ್ರಮ ಕೈಗೊಳ್ಳಿ. ಈಗ ನಿಮಗೆ ಬಿಎಸ್ ವೈ ಬೇಕಿದೆ ಎಂದು ಗರಂ ಆಗಿದ್ದಾರೆ..  ಇವರಪ್ಪನ್ನನ್ನು ಕರೆ ತಂದಿದ್ದು ನಾನೇ..! ಇನ್ನೂ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಮಾಜಿ ಶಾಸಕ ಗುರುಸಿದ್ದನಗೌಡ ಮಾತನಾಡಿ, ಸಂಸದ ಜಿಎಂ ಸಿದ್ದೇಶ್ವರ್ ಅವರು ಇದಕ್ಕೆಲ್ಲ ಕಾರಣ, ಚಿತ್ರದುರ್ಗದಲ್ಲಿದ್ದ ಇವರ ಅಪ್ಪ ಮಲ್ಲಿಕಾರ್ಜುನಪ್ಪ ಅವರನ್ನ ದಾವಣಗೆರೆಗೆ ಕರೆ ತಂದಿದ್ದೆ ನಾನು, ಜಿಎಂ ಸಿದ್ದೇಶ್ವರ್ ಕಾಂಗ್ರೆಸ್ ನಲ್ಲಿ ಇದ್ದರು, ಸಿದ್ದೇಶ್ವರ್ ಅವರ ಅಪ್ಪನಿಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದ ಮನುಷ್ಯ, ನಮ್ಮ ಅಪ್ಪ ಗೆದ್ದ ಮೇಲೆ ಬಿಜೆಪಿಗೆ ಬರುತ್ತೇನೆ ಎಂದು ಹೇಳುತ್ತಿದ್ದ, ಈಗ ಬಿಜೆಪಿ ಕಾರ್ಯಕರ್ತರನ್ನ ಉದಾಸೀನ ಮಾಡುತ್ತಾನೆ, ಪಕ್ಷದ ಹಿರಿಯ ನಾಯಕರ ಗಮನಕ್ಕೆ ತಂದಿದ್ದೇವೆ, ನನ್ನ ಮಗ ಎಂಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರಿಗೆ ಟಿಕೆಟ್ ಕೈ ತಪ್ಪುವ ಭೀತಿಯಿಂದ ಈ ರೀತಿ ಷ್ಯಡ್ಯಂತ್ರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.. ಒಟ್ಟಾರೆ ಗಾಯದ ಮೇಲೆ ಬರೆ ಎಳೆದಂತೆ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಿವೆ, ಇದರಿಂದ ಬಿಜೆಪಿ ಪಕ್ಷದಲ್ಲಿ ಎಲ್ಲವು ಸರಿ ಇಲ್ಲ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ, ರಾಜ್ಯ ಹಾಗೂ ಜಿಲ್ಲೆಗಳಲ್ಲೂ ಪಕ್ಷದಲ್ಲಿ ಹೇಳುವವರು ಕೇಳುವವರು ಇಲ್ಲದಂತಾಗಿದ್ದು, ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳು ಎಲ್ಲಿಗೆ ಬಂದು ನಿಲ್ಲುತ್ತೋ ಕಾದು ನೋಡಬೇಕಿದೆ..