POWER SAMACHARA | KANNADA NEWS | BIG BREKING NEWS|16-06-2023
ದಾವಣಗೆರೆ: ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ವಿಶೇಷ ಪೂಜೆ ಸಲ್ಲಿಕೆ ಮಾಡಿ 101 ತೆಂಗಿನಕಾಯಿ ಹೊಡೆಯಲಾಗಿದೆ, ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಸ್ಥಾನದಲ್ಲಿ ಕುರುಬ ಸಮಾಜ ಸೇರಿದಂತೆ ವಿವಿಧ ಸಮಾಜದ ಮುಖಂಡರು ಭಾಗಿಯಾಗಿ ಫೋಟೊ ಇಟ್ಟು ಪೂಜೆ ಸಲ್ಲಿಕೆ ಮಾಡಿದರು.
ಕುರುಬ ಸಮಾಜದ ಮುಖಂಡ ಲಿಂಗರಾಜ್ ನೇತೃತ್ವದಲ್ಲಿ ಪೂಜೆ ಸಲ್ಲಿಕೆ ಮಾಡಿ ಬಳಿಕ ನೂರ ಒಂದು ತೆಂಗಿನಕಾಯಿ ಹೊಡೆದು ಪೂಜೆ ಸಲ್ಲಿಕೆ ಮಾಡಲಾಗಿದೆ, ಬಡವರ ಭಾಗ್ಯ ಸಿದ್ದರಾಮಯ್ಯ ನವರು, ಸಿದ್ದರಾಮಯ್ಯ ಸಿಎಂ ಆದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ, ಈ ಹಿನ್ನಲೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕು ಎಂದು ಮನವಿ ಮಾಡಿದರು.. ಈ ಸಂದರ್ಭದಲ್ಲಿ ಕುರುಬ ಸಮಾಜ ಸೇರಿದಂತೆ ವಿವಿಧ ಸಮಾಜದ ಮುಖಂಡರು ಇದ್ದರು..