POWER SAMACHARA | KANNADA NEWS | 23-04-2023
ದಾವಣಗೆರೆ: ತುಂಗಾಭದ್ರಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ನಡೆದಿದೆ.

ಸಹೋದರರಾದ ಕಿರಣ್, ವರುಣ್ ಹಾಗೂ ಗ್ರಾಮದ ಪವನ್ ನೀರು ಪಾಲಾದ ಯುವಕರು ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದರು.

ಯುವಕರಿಗಾಗಿ ತುಂಗಭದ್ರಾ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಮೂವರಲ್ಲಿ ವರುಣ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.