POWER SAMACHARA | KANNADA NEWS | BREKING NEWS| 21-06-2023..

ದಾವಣಗೆರೆ: ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ವಾಪಾಸ್ ಹಿನ್ನಲೆ ದಾವಣಗೆರೆಯಲ್ಲಿ ವಿಶ್ವ ಹಿಂದು ಪರಿಷತ್ ನಿಂದ ಪ್ರತಿಭಟನೆ ನಡೆಸಲಾಗಿದೆ, ನಗರದ ಜಯದೇವ ವೃತ್ತದಿಂದ ಎಸಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ್ದು, ಸರ್ಕಾರದ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಿ ಕಾಯ್ದೆ ರದ್ದು ವಾಪಸ್ ಪಡೆಯಬೇಕು ಎಂದು ಆಗ್ರಹಪಡಿಸಲಾಗಿದೆ..

ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡನೀಯ, ಭಾರತವು ಹಿಂದೂ ರಾಷ್ಟ್ರವಾಗಿದೆ, ಇಲ್ಲಿ ಹಿಂದುಗಳೊಡನೆ ಅನ್ಯ ಧರ್ಮೀಯರೂ ಸಹ ಸಹಬಾಳ್ವೆ ಮಾಡುತ್ತಿದ್ದಾರೆ, ತಮ್ಮ ಧರ್ಮ ಮತಾಚರಣೆ ಮಾಡಲು ಅವಕಾಶವಿದೆ, ಆದರೆ ಹಿಂದೂಗಳಿಗೆ ಆಮಿಷ ತೋರಿಸಿ ಅಥವಾ ಹೆದರಿಸಿ ಬಲವಂತವಾಗಿ ಮತಾಂತರಿಸಲಾಗುತ್ತಿದೆ ಎಂದು ಆರೋಪಿಸಿದರು..

ಮರುಳು ಮಾಡಿ ಮತಾಂತರಿಸುವುದು ನಡೆಯುತ್ತಿದೆ, ಇಲ್ಲಿನ ಹಿಂದೂಗಳನ್ನು ಮತಾಂತರದಿಂದ ರಕ್ಷಿಸಬೇಕಿದೆ, ನಮ್ಮ ಧರ್ಮವನ್ನು ಕಾಪಾಡುವುದು ಪ್ರತಿಯೊಬ್ಬ ಹಿಂದೂವಿನ ಕರ್ತವ್ಯ, ಕೇವಲ ಅಲ್ಪಸಂಖ್ಯಾತರ ಓಲೈಕೆ ಸರಿಯಲ್ಲ, ಕಾಂಗ್ರೆಸ್ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ..